ಜಿಲ್ಲೆ

ಹಿಂದು ಹಿತರಕ್ಷಣಾ ಸಮಿತಿಯಿಂದ ಮೆರವಣಿಗೆ

ರಾಜಣ್ಣ

ಗುಂಡ್ಲುಪೇಟೆ: ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಅವರ ಸುರಕ್ಷತೆಗೆ ಒತ್ತಾಯಿಸಿ ಪಟ್ಟಣದಲ್ಲಿ ಸೋಮವಾರ ಹಿಂದು ಹಿತರಕ್ಷಣಾ ಸಮಿತಿಯ ಸದಸ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು.


ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಿಂದ ಕೈಯಲ್ಲಿ ಭಗಾವಾಧ್ವಜ ಹಾಗೂ ಪ್ಲೇಕಾರ್ಡ್ ಹಿಡಿದು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ ಹಿಂದು ಕಾರ್ಯಕರ್ತರು ಬಾಂಗ್ಲಾದಲ್ಲಿನ ಹಿಂದುಗಳ ಸುರಕ್ಷತೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.


ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜ್ಯನ್ಯ ಹಾಗೂ ಹಿಂದು ದೇವಾಲಯಗಳನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಯನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.