ಜಿಲ್ಲೆ

ಮಕ್ಕಳ ಪ್ರೋತ್ಸಾಹಕ್ಕೆ ’ಮಕ್ಕಳ ದಸರಾ’ದಂತಹ ಕಾರ್ಯಕ್ರಮ ಅವಶ್ಯಕ; ರವೀಂದ್ರ ರೈ

ಮಡಿಕೇರಿ: ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಕ್ಕಳ ದಸರಾ ದಂತಹ ಕಾರ್ಯಕ್ರಮ ಅವಶ್ಯಕ ಎಂದು ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ರವೀಂದ್ರ ರೈ ಹೇಳಿದರು.


ಮಡಿಕೇರಿ ದಸರಾ ಸಮಿತಿ ಮತ್ತು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದೊಂದಿಗೆ ನಗರದ ಕಲಾ ಸಂಭ್ರಮ ವೇದಿಕೆಯಲ್ಲಿ ಸೋಮವಾರ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.


೮ ವರ್ಷದಿಂದ ಆಯೋಜಿಸಲಾಗಿದೆ. ಆದರೆ, ಕೋವಿಡ್ ಮತ್ತು ಪ್ರಾಕೃತಿಕ ವಿಕೋಪದಿಂದ ವಿಜೃಂಭಣೆ ದಸರಾ ನಡೆಸಲು ಸಾಧ್ಯವಾಗಿರಲಿಲ್ಲ. ಪ್ರಸಕ್ತ ವರ್ಷ ಉತ್ತಮವಾಗಿ ಆಯೋಜಿಸಲಾಗಿದೆ. ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಅವಶ್ಯಕ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಸಾದ್ ಗೌಡ ಮಾತನಾಡಿ, ಮಕ್ಕಳ ದಸರಾದಲ್ಲಿ ಉತ್ಸಾಹ ಕಾಣುತ್ತಿದೆ. ಮಕ್ಕಳ ಪಾಲ್ಗೊಳ್ಳುವಿಕೆಯಿಂದ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕರು, ದಸರಾ ಸಮಿತಿ ಮತ್ತು ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಕ್ಕಳ ದಸರಾ ಸಮಿತಿ ಸಂಚಾಲಕ ಎಚ್.ಟಿ.ಅನಿಲ್, ದೈವಾಜ್ಞ ಬ್ರಾಹ್ಮಣರ ಸಂಘದ ಅಧ್ಯಕ್ಷ ಬಿ.ವಿ.ರೋಷನ್, ನಗರಸಭೆ ಸದಸ್ಯರಾದ ಶ್ವೇತ ಪ್ರಶಾಂತ್, ಸಭೀತಾ, ಮಂಜುಳ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವಿಕರ್, ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ ಇತರರಿದ್ದರು.