ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ 
ಜಿಲ್ಲೆ

ಆಲಮಟ್ಟಿ ಜಲಾಶಯಕ್ಕೆ ಶೀಘ್ರ ಬಾಗಿನ

ಗಿರೀಶ ಸಗರ

ಆಲಮಟ್ಟಿ: ಸಂಪೂರ್ಣ ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳು ಶೀಘ್ರ ಬಾಗಿನ ಅರ್ಪಿಸಲಿದ್ದಾರೆ ಎಂದು ಕಷ್ಣಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಕೆಬಿಜೆನ್ನೆಲ್ ಎಂಡಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದರಿಂದ ಬಾಗಿನ ಅರ್ಪಿಸುವಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದ್ದು, ಕೆಲ ದಿನಗಳಲ್ಲಿ ಬಾಗಿನ ಅರ್ಪಿಸುವುದಾಗಿ ತಿಳಿಸಿದ್ದಾರೆ ಎಂದರು.