ಜಿಲ್ಲೆ

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಥೂ...ಥೂ.. ಎನ್ನುತ್ತಲೇ ಆಕ್ರೋಶ ಹೊರಹಾಕಿದ ರಮೇಶ್ ಜಾರಕಿಹೊಳಿ

arunakunigal

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ,‌ ಥೂ.. ಥೂ.. ಎಂದು ಗೇಲಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್​ ಜಾರಕಿಹೊಳಿ, ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಪರ ನಾಮಪತ್ರ ಸಲ್ಲಿಸಲಿದ್ದೇವೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠಗೆ ಮೊದಲ ಪ್ರಾಶಸ್ತ್ಯದ ಮತವನ್ನ ಕೊಡಿ. ನಾವು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕಿದೆ. ಎರಡನೇ ಪ್ರಾಶಸ್ತ್ಯದ ಮತವನ್ನು ನನ್ನ ಸಹೋದರ ಲಖನ್ ಜಾರಕಿಹೊಳಿ‌ಗೆ ನೀಡಿ ಎಂದರು. ಇದೇ ವೇಳೆ ಪರಿಷತ್ ಚುನಾವಣೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ‌ ಎಂಬ ಮಾತು ಇದೆ ಮಾಧ್ಯಮದವರು ಹೇಳುತ್ತಿದ್ದಂತೆ ಗರಂ ಆದ ರಮೇಶ್​ ಜಾರಕಿ ಹೊಳಿ, ‌ ಥೂ.. ಥೂ.. ಎಂದೇಳಿ ಹೊರಟರು.