ಜಿಲ್ಲೆ

ರಂಜಾನ್ ಸಡಗರ: ಸಾಮೂಹಿಕ ಪ್ರಾರ್ಥನೆ, ಪರಸ್ಪರ ಶುಭಾಶಯ ವಿನಿಮಯ

arunakunigal

ಹುಬ್ಬಳ್ಳಿ: ರಂಜಾನ್ ಹಬ್ಬದ ಹಿನ್ನೆಲೆ ಮುಸ್ಲಿಮರು ಎಲ್ಲೆಡೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭ ಕೋರಿದ ದೃಶ್ಯ ಕಂಡುಬಂತು. ಹುಬ್ಬಳ್ಳಿಯ ಚನ್ನಮ್ಮ ವೃತ್ತ ಸಮೀಪ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕೋವಿಡ್ ಲಾಕ್​ಡೌನ್ ಕಾರಣ ಎರಡು ವರ್ಷ ರಂಜಾನ್​ ವೇಳೆ ಸಾಮೂಹಿಕ ಪ್ರಾರ್ಥನೆ ಮಾಡಿರಲಿಲ್ಲ. ಈ ಬಾರಿ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಶುಭ ಕೋರಿದರು‌. ಮುಸ್ಲಿಂ ಧರ್ಮಗುರುಗಳು, ಮುಖಂಡರು, ಶಾಸಕ ಪ್ರಸಾದ ಅಬ್ಬಯ್ಯ ಮತ್ತಿತರರು ಪಾಲ್ಗೊಂಡಿದ್ದರು.

ಹಳೇ ಹುಬ್ಬಳ್ಳಿ ಈದ್ಗಾ ಮೈದಾನದಲ್ಲೂ ಸಂಭ್ರಮದಿಂದ ರಂಜಾನ್ ಆಚರಿಸಲಾಯಿತು. ಎಲ್ಲೆಡೆ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.