ಜಿಲ್ಲೆ

ಅಬ್ಬರದ ಮಳೆಗೆ ತುಂಬಿ ಹರಿದ ಹಳ್ಳಕೊಳ್ಳ

ಬಸವರಾಜ ವೀರಪ್ಪ ಗರಗ

ಯಲ್ಲಾಪುರ: ತಾಲೂಕಿನಲ್ಲಿ ಮಂಗಳವಾರವೂ ಅಬ್ಬರದ ಮಳೆ ಮುಂದುವರಿದಿದೆ. ಜೋರಾದ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಮಳೆ-ಗಾಳಿಯ ಪರಿಣಾಮ ಗ್ರಾಮೀಣ ಭಾಗದ ಹಲವೆಡೆ ವಿದ್ಯುತ್ ಕಂಬ, ತಂತಿಯ ಮೇಲೆ ಮರಗಳು ಬಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪಟ್ಟಣದಲ್ಲೂ ವಿದ್ಯುತ್ ಕಣ್ಣಾಮುಚ್ಚಾಲೆ ಮುಂದುವರಿದಿದೆ.

ಬೇಡ್ತಿ ನದಿ ತುಂಬಿ ಹರಿಯುತ್ತಿದ್ದು, ಇಡಗುಂದಿ ಗ್ರಾ.ಪಂ ವ್ಯಾಪ್ತಿಯ ಫಣಸಗುಳಿ ಬಳಿಯ ತಾತ್ಕಾಲಿಕ ಸೇತುವೆ ಮುಳುಗಡೆಯಾಗಿದೆ.್ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿದೆ.