ಅರಸೀಕೆರೆ: ದೇವರು ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಲಿದೆ ಎಂದು ಕೇದಾರನಾಥ ಶ್ರೀ ರಾವುಲು ಭೀಮಾಶಂಕರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಂಚಪೀಠ ಧಾರ್ಮಿಕ ಉತ್ಸವ ಸಮಿತಿ ಹಾಗೂ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನಗರದ ವೀರಶೈವ ಸಮುದಾಯ ಭವನದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಧಾರ್ಮಿಕ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಮುಂದಾಗಿದ್ದವರಿಗೆ ಈಗಾಗಲೇ ಉತ್ತರ ದೊರೆತಿದೆ. ಉತ್ತರ ಪ್ರದೇಶದಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಅರಸೀಕೆರೆ ಪಟ್ಟಣದಲ್ಲಿ ಹೆಣ್ಣು ಮಕ್ಕಳು ಅಡ್ಡಪಲ್ಲಕ್ಕಿ ಉತ್ಸವದಲ್ಲಿ ಕುಂಭ ಹೊತ್ತು ಸ್ವಾಗತಿಸಿದರು. ಇಂತಹ ಅವಿಸ್ಮರಣೀಯ ಕ್ಷಣಕ್ಕೆ ತಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಬದುಕಿನಲ್ಲಿ ದಾನ ಧರ್ಮ ಮಾಡುವ ಪರಂಪರೆಯ ಹಾದಿಯಲ್ಲಿ ಸಾಗಬೇಕು ಎಂದು ಕಿವಿಮಾತು ಹೇಳಿದರು.
ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಕರಿವೃಷಭ ಶಿವಯೋಗಿಶ್ವರ ಸ್ವಾಮೀಜಿ, ಗವಿಮಠ ಕಣ್ಣು ಕುಪ್ಪೆ, ನಾಲ್ವಡಿ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಶಶಿಶೇಖರ ಸಿದ್ಧಬಸವ ಸ್ವಾಮೀಜಿ, ದೊಡ್ಡಗುಣಿ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ನುಗ್ಗೇಹಳ್ಳಿ ಶಿವಪ್ರಕಾಶ ಸ್ವಾಮೀಜಿ, ಮಾಜಿ ಶಾಸಕ ಕೆ.ಪಿ.ಪ್ರಭುಕುಮಾರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್, ಮುರುಂಡಿ ಶಿವಯ್ಯ, ಅಣ್ಣೇನಹಳ್ಳಿ ಸಿದ್ದರಾಜು, ಗಂಡಸಿ ಷಡಕ್ಷರಿ, ಬಿ.ಪಿ.ಸುರೇಶ್, ಮಂಜುನಾಥ್, ಪ್ರವೀಣ್, ಶಿಲ್ಪಾ ಸತೀಶ್ ಸೇರಿದಂತೆ ಹಲವರು ಇದ್ದರು.