ಹಿರಿಯೂರು: ಹಿಂದುಳಿದ ಉಪ್ಪಾರ ಸಮುದಾಯಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾ ಉಪ್ಪಾರ ಸಂಘದ ಮಾಜಿ ಅಧ್ಯಕ್ಷ ಆರ್.ಮೂರ್ತಿ ಒತ್ತಾಯಿಸಿದ್ದಾರೆ.
ಹೊಸದುರ್ಗದ ಭಗೀರಥ ಮಠದಲ್ಲಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸರ್ಕಾರದ ಸಚಿವರು, ಜಿಲ್ಲೆಯ ಶಾಸಕರು ಭಾಗವಹಿಸಿ, ಸಮುದಾಯದ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಶ್ರೀಗಳ ಆಶಯದಂತೆ ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಾಗಿ ಮಠಕ್ಕೆ ನೀಡಿರುವ 500 ಎಕರೆ ಭೂಮಿಯನ್ನು ಶಾಶ್ವತವಾಗಿ ನೀಡಬೇಕು. ಎಸ್ಟಿ ಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.