ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ಬಂಡೆ ಉರುಳಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದ್ದು, ಗ್ರಾಪಂ ಅಧ್ಯಕ್ಷ ಬಾಸ್ಕರ್ ನಾಯಕ್, ಸದಸ್ಯ ಕೆ.ಬಿ.ಶಂಶುದ್ಧೀನ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಜಿಲ್ಲೆ

ಬಂಡೆ ಉರುಳಿ ಮನೆಗೆ ಹಾನಿ

ನಾಗೇಶ ಎಸ್

ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಗ್ರಾಮದಲ್ಲಿ ಶನಿವಾರ ಬಂಡೆ ಉರುಳಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ. ಸ್ಥಳಕ್ಕೆ ಸ್ಥಳೀಯ ಸದಸ್ಯ ಕೆ.ಬಿ.ಶಂಶುದ್ಧೀನ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನವಗ್ರಾಮದ ಅಂಗವಿಕಲ ಗುರುಮೂರ್ತಿ ಅವರ ಮನೆಗೆ ಬಂಡೆ ಬಿದ್ದು ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆಯವರಿಗೆ ಯಾವುದೇ ತೊಂದರೆಯಾಗಿಲ್ಲ. ಮಳೆಯ ಅವಾಂತರದಿಂದ ಅನಾಹುತ ಸಂಭವಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಗುರುಮೂರ್ತಿ ಆಗ್ರಹಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಮಳೆಯಿಂದಾಗಿ ಬಂಡೆ ಉರುಳಿ ಬಿದ್ದಿದೆ. ಇದರಿಂದಾಗಿ ಗುರುಮೂರ್ತಿ ಮನೆಗೆ ಹಾನಿಯಾಗಿದೆ. ಇವರು ಅಂಗವಿಕಲರಾಗಿದ್ದು, ಅಧಿಕಾರಿಗಳು ಸಮಸ್ಯೆಯನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕೂಡುಮಂಗಳೂರು ಗ್ರಾಪಂ ಅಧ್ಯಕ್ಷ ಬಾಸ್ಕರ್ ನಾಯಕ್, ಪಿಡಿಒ ಸಂತೋಷ್, ಗ್ರಾಮ ಲೆಕ್ಕಿಗ ಗುರುದರ್ಶನ್, ಸಿಬ್ಬಂದಿ ಲೋಕೇಶ್ ಇದ್ದರು.