ದೊಡ್ಡಬಳ್ಳಾಪುರ: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.28ರಂದು ಬೆಳಗ್ಗೆ 9ಕ್ಕೆ ಸಪ್ತಪದಿ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿ ಸಲ್ಲಿಸುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5000 ರೂ. ನಗದು ಹಾಗೂ ವಧುವಿಗೆ 10,000 ರೂ. ನಗದು ಮತ್ತು 40 ಸಾವಿರ ಮೌಲ್ಯದ ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು ನೀಡಲಾಗುವುದು. ವಧು-ವರರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಆ.10ರೊಳಗೆ ನೊಂದಾಯಿಸಿಕೊಳ್ಳಬೇಕು.
ಆ.13ರಂದು ನೋಂದಾಯಿತ ವಧು-ವರನ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಲಿದ್ದು, ಆ.16ರ ರೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಅಂತಿಮ ವಧು-ವರರ ಪಟ್ಟಿಯನ್ನು ಆ.18ರಂದು ಪ್ರಕಟಿಸಲಾಗುವುದು. ಮಾಹಿತಿಗೆ 99800 31222 ಸಂಪರ್ಕಿಸಿ.