ಜಿಲ್ಲೆ

ಮಧ್ಯಂತರ ಚುನಾವಣೆ ಡೌಟಲ್ಲಿ ಸಿದ್ದರಾಮಯ್ಯ!

ತುಮಕೂರು: ಸದ್ಯಕ್ಕೆ ಮಧ್ಯಂತರ ಚುನಾವಣೆ ನಿರೀಕ್ಷೆ ಇಲ್ಲ. ಮುಂದಿನ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಒಬ್ಬರು ಭ್ರಷ್ಟ ಸಿಎಂ ಹೋಗಿ, ಇನ್ನೊಬ್ಬರು ಭ್ರಷ್ಟ ಸಿಎಂ ಬರ್ತಾರೆ ಅಷ್ಟೆ ಎನ್ನುವ ಮೂಲಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ವ್ಯಂಗ್ಯವಾಡಿದರು.

ಬಿಜೆಪಿಯವರಿಗೆ ಜನರ ಹಿತ ಮುಖ್ಯವಲ್ಲ, ಅಧಿಕಾರ ಮುಖ್ಯ. ನೆರೆ ಬಗ್ಗೆ ಅವರು ತಲೆಕೆಡಿಸಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ಮುಂದಿನ ಚುನಾವಣೆ ಹಾಗೂ ಪಕ್ಷ ಸಂಘಟನೆ ನಿಟ್ಟಿನಲ್ಲಿ ತುಮಕೂರಿನಲ್ಲಿ ಬೆಂಗಳೂರು ವಿಭಾಗೀಯ ಮಟ್ಟದ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ನೆರೆ ವಿಚಾರವಾಗಿ ಜನರಿಗೆ ನೆರವಾಗಲು ಸತೀಶ್ ಜಾರಕಿಹೊಳಿ ಮತ್ತು ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿದ್ದೇವೆ ಎಂದು ತಿಳಿಸಿದರು.