ಮೈಸೂರು: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿಯಲ್ಲಿ ಫೆ. 10 ರವರೆಗೆ “ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ" ಎಂಬ ವಿಷಯದ ಬಗ್ಗೆ ರೈತ/ರೈತಮಹಿಳೆಯರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವ ರೈತ/ ರೈತಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಆಸಕ್ತ ರೈತ/ರೈತಮಹಿಳೆಯರು ತಮ್ಮ ಹೆಸರನ್ನು ಸಹಾಯಕ ಕೃಷಿ ನಿರ್ದೇಶಕರ ದೂ.ಸಂ: 8277933179 ಗೆ ಕರೆಮಾಡಿ ತಮ್ಮ ಹೆಸರುಗಳನ್ನು ನೋಂದಾಯಿಸತಕ್ಕದ್ದು. ಕೇವಲ ಮೈಸೂರು ಜಿಲ್ಲೆಯ 30 ರೈತ/ ರೈತಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲು, ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.