ಜಿಲ್ಲೆ

ಸಂಘಟಿತರಾದರೆ ನೌಕರರ ಸಮಸ್ಯೆಗೆ ಪರಿಹಾರ

ರವಿ ಎಸ್. ಬಳೂಟಗಿ

ಲಕ್ಷ್ಮೇಶ್ವರ: ಸಂಘಟನೆಯಿಂದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದಾಗಿದೆ. ಬಿಡಿಯಾಗಿ ಬದುಕದೆ ಇಡಿಯಾಗಿ ಬದುಕುವ ಮನೋಧರ್ಮ ಎಲ್ಲರದ್ದಾಗಬೇಕು ಎಂದು ಹೂವಿನಶಿಗ್ಲಿಯ ಶ್ರೀ ಚನ್ನವೀರ ಮಹಾಸ್ವಾಮೀಜಿ ನುಡಿದರು.

ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗ ಸಭಾಭವನದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಸರ್ಕಾರಿ ನೌಕರರು ಹತ್ತಾರು ಸಮಸ್ಯೆ, ಒತ್ತಡಗಳನ್ನು ಎದುರಿಸುತ್ತಿದ್ದಾರೆ. ನ್ಯಾಯಯುತವಾಗಿ ಸಿಗಬೇಕಾದ ಗೌರವ, ಸೌಲಭ್ಯಗಳನ್ನು ಪಡೆಯಲು ಒಗ್ಗಟ್ಟಾಗಬೇಕು. ಈ ನಿಟ್ಟಿನಲ್ಲಿ ಸಂಘಟನೆಯ ನೇತೃತ್ವ ವಹಿಸಿದವರ ಪಾತ್ರ ಮಹತ್ವದ್ದಾಗಿದೆ. ಎಲ್ಲರನ್ನೂ ಸ್ನೇಹ, ಪ್ರೀತಿ, ವಿಶ್ವಾಸ, ಸೌಹಾರ್ದದಿಂದ ಕಾಣಬೇಕು ಎಂದರು.

ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ನೌಕರರು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಬೇಕು. ನೌಕರರ ಬೇಡಿಕೆಗಳಿಗೆ ಸದಾ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

ಸಂಘದ ಜಿಲ್ಲಾದ್ಯಕ್ಷ ರವಿ ಗುಂಜಿಕರ ಮಾತನಾಡಿ, ನೌಕರರ ಭರವಸೆ, ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಸರ್ಕಾರಿ ನೌಕರರ ಸಂಘ ಪ್ರಧಾನ ಪಾತ್ರ ವಹಿಸುತ್ತದೆ. ಸಂಘದಲ್ಲಿ ಕೆಲಸ ಮಾಡುವಂತಹ ಎಲ್ಲ ಸದಸ್ಯರೂ ಸಂಘದ ಉದ್ದೇಶಗಳಿಗೆ ಬೆಂಬಲ ನೀಡಬೇಕು ಎಂದರು.

ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ ಮಾತನಾಡಿದರು. ತಾಲೂಕಾಧ್ಯಕ್ಷ ಗುರುರಾಜ ಹವಳದ, ಮಾಜಿ ಶಾಸಕ ರಾಮಣ್ಣ ಲಮಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಣಕಿ ನಾಯಕ, ಸಂಘದ ನಿಕಟಪೂರ್ವ ತಾಲೂಕಾಧ್ಯಕ್ಷ ಡಿ.ಎಚ್. ಪಾಟೀಲ ಮಾತನಾಡಿದರು. ಬಿಆರ್‌ಪಿ ಈಶ್ವರ ಮೆಡ್ಲೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ, ತಹಸೀಲ್ದಾರ್ ವಾಸುದೇವ ಸ್ವಾಮಿ, ತಾಪಂ ಇಒ ಕೃಷ್ಣಪ್ಪ ಧರ್ಮರ, ಬಸವರಾಜ ಬಳ್ಳಾರಿ, ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ, ಡಾ. ಪ್ರವೀಣ ಸಜ್ಜನ, ಬಿ.ಎಸ್. ಹರ್ಲಾಪುರ, ಎಂ.ಎ. ನದಾಫ್, ಜಿ.ಎಸ್. ಗುಡಗೇರಿ, ಎಸ್.ಬಿ. ಅಣ್ಣಿಗೇರಿ, ಬಸವರಾಜ ಯರಗುಪ್ಪಿ, ಚಂದ್ರಕಾಂತ ನೇಕಾರ, ಶಿಗ್ಗಾಂವ ಮತ್ತು ಸವಣೂರ ನೌಕರರ ಅಧ್ಯಕ್ಷರು ಪಾಲ್ಗೊಂಡಿದ್ದರು. ತಾಲೂಕಾಧ್ಯಕ್ಷ ಗುರುರಾಜ ಹವಳದ ಸೇರಿ ಪದಾಧಿಕಾರಿಗಳು ಪದಗ್ರಹಣ ಮಾಡಿದರು. ಎಚ್.ಡಿ. ನಿಂಗರಡ್ಡಿ ಮತ್ತು ಎಂ.ಎನ್. ಹುಬ್ಬಳ್ಳಿ ನಿರೂಪಿಸಿದರು.