oppo_34 
ಜಿಲ್ಲೆ

ವಿಶೇಷ ಪೂಜಾ ಕಾರ್ಯಕ್ರಮ

Mysuru - Desk - Ravikumar

ಮಂಡ್ಯ: ಮದ್ದೂರು ಪಟ್ಟಣದ ಕೋಟೆಬೀದಿಯಲ್ಲಿರುವ ರಾಘವೇಂದ್ರಸ್ವಾಮಿ ಮಠದಲ್ಲಿ ಗುರುಸಾರ್ವಭೌಮರ ಆರಾಧನೆ ಅಂಗವಾಗಿ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.


ಮೂರು ದಿನಗಳ ಕಾಲ ನಡೆಯುವ ಆರಾಧನಾ ಕಾರ್ಯಕ್ರಮದಲ್ಲಿ ಮೊದಲ ದಿನ ಮಂಗಳವಾರ ವಿಶೇಷ ಪೂಜೆ, ರಾಯರಿಗೆ ಹೂವಿನ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ವಿಶೇಷ ಪೂಜೆ ಸಲ್ಲಿಸಿಸಿದರು. ಆರಾಧನೆಗಾಗಿ ಮಠವನ್ನು ವಿದ್ಯುತ್ ದೀಪಾಲಂಕಾರಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.