ಕುಂದಾಪುರ: ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆ ಕುರಿತು ಪ್ರಾಯೋಗಿಕ ಜ್ಞಾನ ನೀಡಲು ಕೆಸರಲ್ಲೊಂದಿನ ನೆಟ್ಟಿ ಎನ್ನುವ ವಿಶೇಷ ಕಾರ್ಯಕ್ರಮ ಶನಿವಾರ ಆನಗಳ್ಳಿಯಲ್ಲಿ ನಡೆಯಿತು.
ಕಾಲೇಜು ಪ್ರಾಂಶುಪಾಲ ಸಂದೀಪ್ ಗಾಣಿಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪ ಪ್ರಾಂಶುಪಾಲ ಸುಜಯ್ ಕೊಟೆಗಾರ್, ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥೆ ಲತಾ ಪೈ, ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕೆಸರುಗದ್ದೆಯಲ್ಲಿ ಮನೋರಂಜನಾ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಂದ ಗದ್ದೆ ನಾಟಿ ಮಾಡಿಸುವುದರ ಮೂಲಕ ನೆಟ್ಟಿಯ ಬಗ್ಗೆ ಪ್ರಾಯೋಗಿಕ ಮಾಹಿತಿ ನೀಡಲಾಯಿತು.