ದಾವಣಗೆರೆ: ನ್ಯಾಮತಿ ತಾಲೂಕು ಸಾಲಬಾಳು-ಸುರಹೊನ್ನೆ ಗ್ರಾಮಗಳ ಮಾರ್ಗಮಧ್ಯೆ ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ ಸಂಭವಿಸಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಓವರ್ಟೇಕ್ ಮಾಡುವ ಭರದಲ್ಲಿ ಬಸ್ ಚಾಲಕರು ಮುಂದಾಗಿದ್ದರಿಂದ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಗಾಯಾಳುಗಳಿಗೆ ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.