ಜಿಲ್ಲೆ

ತುಮಕೂರಲ್ಲೂ ವೀರ ಸಾವರ್ಕರ್ ಭಾವಚಿತ್ರವುಳ್ಳ ಫ್ಲೆಕ್ಸ್​ ಹರಿದ ಕಿಡಿಗೇಡಿಗಳು

arunakunigal

ತುಮಕೂರು: ಬೆಂಗಳೂರು, ಶಿವಮೊಗ್ಗದ ಬಳಿಕ ತುಮಕೂರಲ್ಲೂ ವೀರ ಸಾವರ್ಕರ್ ಭಾವಚಿತ್ರವುಳ್ಳ ಫ್ಲೆಕ್ಸ್​ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

ನಗರದ ಎಂಪ್ರೆಸ್ ಕಾಲೇಜು ಮುಂಭಾಗ ಹಾಕಲಾಗಿದ್ದ ಫ್ಲೆಕ್ಸ್​ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಫ್ಲೆಕ್ಸ್ ಹಾಕಲಾಗಿತ್ತು. ಇದರಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಹರಿದಿದ್ದಾರೆ. ಮೂರು ದಿನಗಳ‌ ಹಿಂದೆ ನಗರದಲ್ಲಿ 80ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್ ಅನ್ನು ನಗರ ಬಿಜೆಪಿ ಶಾಸಕ ಜ್ಯೋತಿಗಣೇಶ್ ಹಾಕಿಸಿದ್ದರು. ಕಳೆದ ರಾತ್ರಿ ವೀರ ಸಾರ್ವಕರ್ ಭಾವಚಿತ್ರವಿರುವ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.