ಬೆಂಗಳೂರು: ರಾಜ್ಯದ ಹಿರಿಯ ಶಾಸಕ, ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ತೀವ್ರ ಹೃದಯಾಘಾತದಿಂದ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
'ಕರ್ನಾಟಕದ ಅಭಿವೃದ್ಧಿಗೆ ಉಮೇಶ್ ಕತ್ತಿ ಜೀ ಅವರು ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ಅನುಭವಿ ನಾಯಕರಾಗಿದ್ದ ಉಮೇಶ್ ಕತ್ತಿ ಜೀ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಅವರ ಕುಟುಂಬಕ್ಕೆ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.