ಜಿಲ್ಲೆ

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ: 3 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡ ಹೊರಟ್ಟಿ

arunakunigal

ಬೆಳಗಾವಿ: ವಿಧಾನ ಪರಿಷತ್​ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಸರಾಗವಾಗಿ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಸುತ್ತಿನಲ್ಲಿ 11000 ಮತಗಳ ಎಣಿಕೆ ಮುಕ್ತಾಯವಾಗಿದ್ದು, ಹೊರಟ್ಟಿಗೆ 6479 ಮತಗಳು ಬಂದಿವೆ. ಕಾಂಗ್ರೆಸ್‌ನ ಬಸವರಾಜ ಗುರಿಕಾರಗೆ 3314 ಮತ ಲಭಿಸಿದ್ದು, ಹೊರಟ್ಟಿ 3165 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನು 4579 ಮತ ಎಣಿಕೆ ಬಾಕಿ ಇದೆ.

ವಾಯುವ್ಯ ಪದವೀಧರ ಕ್ಷೇತ್ರ, ವಾಯವ್ಯ ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಜೂ.13ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನಲ್ಲಿ ಇಂದು ನಡೆಯುತ್ತಿದೆ. ದಕ್ಷಿಣ ಪದವೀಧರರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ಮ್ಯಾನೇಜ್​ಮೆಂಟ್​ ಕಾಲೇಜಿನಲ್ಲಿ ನಡೆಯುತ್ತಿದೆ.