ಜಿಲ್ಲೆ

ಅಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದ ಬಳಿ ತುಂಬು ಗರ್ಭಿಣಿಯೊಬ್ಬರು ಅಂಬುಲೆನ್ಸ್ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಅದೇ ಗ್ರಾಮದ ಯಲ್ಲಮ್ಮ(೨೮) ಅವರಿಗೆ ಮಂಗಳವಾರ ಬೆಳಗಿನ ಜಾವ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ಅಂಬುಲೆನ್ಸ್ ತಕ್ಷಣ ಸ್ಥಳಕ್ಕೆ ದಾವಿಸಿದ್ದು, ಯಮ್ಮಲ್ಲ ಅವರನ್ನು ಹೊಸಪೇಟೆ ತಾಲೂಕು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನೋವು ತೀವ್ರವಾಗಿತ್ತು. ಪರಿಸ್ಥಿತಿಯನ್ನು ಅರಿತ ಆರೋಗ್ಯ ಇಲಾಖೆ ಸಿಬ್ಬಂದಿ ಸುರೇಶ್ ಎಸ್.ಕೆ., ಅಂಬುಲೆನ್ಸ್ ಚಾಲಕ ಬಾಬು ನೆರವಿನೊಂದಿಗೆ ಮಾರ್ಗ ಮಧ್ಯೆಯೇ ಸುರಕ್ಷಿತ ಹೆರಿಗೆ ಮಾಡಿಸುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಬಳಿಕ ಹೊಸಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.