ಮಂಗಳೂರು: ನಗರದಲ್ಲಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಅಪಾರ್ಟ್ಮೆಂಟ್ನ 14ನೇ ಮಹಡಿಯಿಂದ ಜಿಗಿದು ವೃದ್ಧ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕುಲಶೇಖರದಲ್ಲಿ ವಾಸವಿದ್ದ ಪುಷ್ಪಲತಾ (64) ಮೃತರು. ಮುಂಬೈ ವಿಮಾನ ನಿಲ್ದಾಣದ ನಿವೃತ್ತ ಮ್ಯಾನೇಜರ್ ಆಗಿದ್ದ ಪುಷ್ಪಲತಾ, ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿ ಪ್ಲಾಮ ಗ್ರಾಂಡ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. 14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಿನ್ನತೆಯಿಂದ ಬಳಲುತ್ತಿದ್ದ ಪುಷ್ಪಲತಾ, ಈ ಹಿಂದೆಯೋ ಒಮ್ಮೆ ಅತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದು ಬಂದಿದೆ.