ಜಿಲ್ಲೆ

ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು | Church

Church: ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಮಹಿಳೆ ಕುಸಿದು ಬಿದ್ದು ಮೃತಪಟ್ಟಿದ ಘಟನೆ ಉಡುಪಿಯ ಅಜ್ಜರಕಾಡಿನಲ್ಲಿರುವ ಚರ್ಚ್‌ನಲ್ಲಿ ಭಾನುವಾರ (ಮೇ.25) ನಡೆದಿದೆ.

ಉಡುಪಿಯ ಅಜ್ಜರಕಾಡಿನಲ್ಲಿರುವ ಚರ್ಚ್‌ನಲ್ಲಿ ಪ್ರಾರ್ಥನಾ ಕಾರ್ಯದ ಸಮಯದಲ್ಲಿ ಕುಸಿದು ಬಿದ್ದು ಕುಂದಾಪುರದ ಖಾರ್ವಿ ಕೆಳಕೆರೆ ನಿವಾಸಿ ಶಾಂತಿ (52) ಮೃತಪಟ್ಟಿದ್ದಾರೆ.

ಮೃತಪಟ್ಟ ಮಹಿಳೆಯನ್ನು ಕುಂದಾಪುರದ ಖಾರ್ವಿ ಕೆಳಕೆರೆ ನಿವಾಸಿ ಶಾಂತಿ (52) ಎಂದು ಗುರುತಿಸಲಾಗಿದೆ.

ಮೇ 25 ರಂದು ಬೆಳಿಗ್ಗೆ 11:15 ರಿಂದ 11:30 ರ ನಡುವೆ ಈ ಘಟನೆ ಸಂಭವಿಸಿದೆ. ಶಾಂತಿ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆಂದು ವೈದ್ಯರು ಹೇಳಿದ್ದಾರೆ ಎಂದು ಶಾಂತಿ ಅವರ ಮಗಳು ಕವಿತಾ ದೂರಿನಲ್ಲಿ ತಿಳಿಸಿದ್ದಾರೆ

ಕಳೆದ ಐದು ವರ್ಷಗಳಿಂದ ಶಾಂತಿ ಥೈರಾಯ್ಡ್ ಮತ್ತು ಗರ್ಭಾಶಯಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಹೀಗಾಗಿ ಈ ತೊಂದರೆಗಳೇ ಅವರ ಹಠಾತ್ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್​)