ranganath 
ಜಿಲ್ಲೆ

ಪೋಷಕರು ಬೈದಿದ್ದಕ್ಕೆ ಮನನೊಂದು ಡಿಗ್ರಿ ವಿದ್ಯಾರ್ಥಿ ಆತ್ಮಹತ್ಯೆ!

ರಾಯಚೂರು: ಪೋಷಕರು ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಮಂಗಳವಾರ ನಡೆದಿದೆ.

ಲಿಂಗಸೂಗೂರು ತಾಲೂಕಿನ ಗುಂತಗೋಳ ಗ್ರಾಮದ ಬಿಎ ವಿದ್ಯಾರ್ಥಿ ರಂಗನಾಥ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ.

ಲಿಂಗಸೂಗೂರು ಎಸ್ ಟಿ ಕಾಲೇಜು ಹಾಸ್ಟೆಲ್ ನಲ್ಲಿ ವಿಷ ಸೇವಿಸಿದ್ದ ರಂಗನಾಥ್ ಅಸ್ವಸ್ಥಗೊಂಡಿದ್ದರಿಂದ ಲಿಂಗಸೂಗೂರು ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಲಿಂಗಸೂಗೂರಿನಿಂದ ರಾಯಚೂರಿಗೆ ಬರುವಾಗ ದಾರಿ ಮಧ್ಯೆಯೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಈ ಕುರಿತು ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.