ಹಲಗೂರು: ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಶುಕ್ರವಾರ ಸಾವಿಗೀಡಾಗಿದ್ದಾನೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಡೇರಿ ಶೆಟ್ಟಿಹಳ್ಳಿ ಗ್ರಾಮದ ಹರೀಶ್(28) ಮೃತಪಟ್ಟವರು.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ ತನ್ನ ಐದು ಸ್ನೇಹಿತರೊಂದಿಗೆ ಶುಕ್ರವಾರ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದನು. ಕಾವೇರಿ ನದಿಯಲ್ಲಿ ಈಜಾಡಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ.
ಶನಿವಾರ ಸಂಜೆ ನುರಿತ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಮೃತದೇಹವನ್ನು ಒಪ್ಪಿಸಲಾಯಿತು. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.