ಜಿಲ್ಲೆ

ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ಜಗದೀಶ ಹೊಂಬಳಿ

ಬೆಳಗಾವಿ: ತಾಲೂಕಿನ ಹೊನ್ನಿಹಾಳ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಸಾಂಬ್ರಾ ವಿಮಾನ ನಿಲ್ದಾಣ ಕಾಂಪೌಂಡ್ ಹತ್ತಿರದ ಹೊನ್ನಿಹಾಳ ಹೊಲದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಆದರೆ, ಗುರುತು ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ.

ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಮತ್ತು ನಗರ ಪೊಲೀಸ್‌ ಆಯುಕ್ತ ಇಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊನ್ನಿಹಾಳ ಹಾಗೂ ಮಾವಿನಕಟ್ಟಿ ರಸ್ತೆ ಮಾರ್ಗದಲ್ಲಿ ವಾಹನಗಳು ಓಡಾಡದಂತೆ ಪೊಲೀಸರು ತಡೆ ಹಿಡಿದಿದ್ದಾರೆ. ಕೊಲೆ ನಡೆದ ಜಾಗವನ್ನು ಪೊಲೀಸರು ಪರಿಶೀಲಿಸುತಿದ್ದು, ಎಲ್ಲ ರೀತಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.