ಜಿಲ್ಲೆ

ಬೈಕ್ ವ್ಹೀಲಿಂಗ್ ಮಾಡಿದ್ದ ಯುವಕ ಬಂಧನ

ಬೈಕ್ ವ್ಹೀಲಿಂಗ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ.

ಬೆಲವತ್ತ ಗ್ರಾಮದ ಮಸೀದಿ ರಸ್ತೆಯ ಜಬೀ ಬಂಧಿತ. ಈತ ಯಮಹಾ ಆರ್‌ಎಕ್ಸ್ ಬೈಕ್‌ನಲ್ಲಿ ರಿಂಗ್ ರಸ್ತೆಯಲ್ಲಿ ವೀಲ್ಹಿಂಗ್ ಮಾಡಿದ್ದ. ಈ ವಿಡಿಯೋವನ್ನು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಜು.14ರಂದು ಹಂಚಿಕೊಂಡಿದ್ದ.

ಇದನ್ನು ಆಧರಿಸಿ, ಸಿದ್ಧಾರ್ಥ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೈಕ್‌ನ ನೋಂದಣಿ ಸಂಖ್ಯೆ ಆಧರಿಸಿ, ಬುಧವಾರ ಆತನನ್ನು ಪೊಲೀಸರು ಬಂಧಿಸಿದ್ದಾರೆ.