ಕೋಟ: ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಭಿಯಾನಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಆಧಾರ ಮೇಳವೇ ಸಾಕ್ಷಿಯಾಗಿದೆ ಎಂದು ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಸತೀಶ್ ಕುಂದರ್ ಅಭಿಪ್ರಾಯಪಟ್ಟರು. ಕೋಟತಟ್ಟು ಕಾರಂತ ಥೀಂ ಪಾರ್ಕ್‌ನಲ್ಲಿ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಕೋಟ ಕೋಟತಟ್ಟು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಭಿಯಾನ ಉದ್ಘಾಟಿಸಿ ವಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಅಂಚೆ ಇಲಾಖೆ ಕುಂದಾಪುರ ದಕ್ಷಿಣ ಉಪವಿಭಾಗದ ಅಂಚೆ ನಿರೀಕ್ಷಕ ಪೋಲಾ ನಾಗಾಂಜನೇಯಲು, ಮಹೇಂದ್ರ ಕುವಾರ್, ಕೋಟತಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸ್ವತಿ ಪೂಜಾರಿ, ಪ್ರಮುಖರಾದ ಮನೋಹರ್ ಪೂಜಾರಿ, ಲಲಿತಾ ಪೂಜಾರಿ, ವಾಸು ಪೂಜಾರಿ, ವಿದ್ಯಾ ಸಾಲಿಯಾನ್, ಜ್ಯೋತಿ, ಅಶ್ವಿನಿ ದಿನೇಶ್, ಅಂಗನವಾಡಿ ಕಾರ್ಯಕರ್ತೆಯರು ಇದ್ದರು. ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿ ವಂದಿಸಿದರು. ರವೀಂದ್ರ ಕೋಟ ಸಂಯೋಜಿಸಿದರು. ಮಹೇಶ್ ಬೆಳಗಾವಿ ಸಹಕರಿಸಿದರು.