ಜಿಲ್ಲೆ

ಎಎಪಿ ನೂತನ ಪದಾಧಿಕಾರಿಗಳ ಆಯ್ಕೆ

ಆದರ್ಶ್. ಎಂ.ಕೆ.

ಮಡಿಕೇರಿ: ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.


ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಜೆ.ಎಂ.ನಾಸಿರ್ ಅಹಮ್ಮದ್, ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಕಾರ್ಯದರ್ಶಿ ಕೆ.ಎಚ್.ರಿಯಾಜ್, ಜಿಲ್ಲಾ ಎಸ್.ಸಿ/ಎಸ್.ಟಿ. ಘಟಕದ ಅಧ್ಯಕ್ಷ ಎಚ್.ಎ.ರಮೇಶ್, ಸಾಮಾಜಿಕ ಜಾಲತಾಣದ ಜಿಲ್ಲಾ ಉಸ್ತುವಾರಿ ಎಂ.ಇ.ರಫೀಕ್, ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಕೆ.ಪಿ.ಬಾಲಸುಬ್ರಹ್ಮಣ್ಯ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಯಾಜ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಸ್.ಎಂ.ಬೆಳ್ಳಿಯಪ್ಪ, ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಎಚ್.ಎಸ್.ಶೀಲಾವತಿ ಹಾಗೂ ಜಿಲ್ಲಾ ಆಟೋ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷರನ್ನಾಗಿ ಎಸ್.ಅರುಣ ಅವರುಗಳನ್ನು ಆಯ್ಕೆ ಮಾಡಲಾಯಿತು.


ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ ಮಾತನಾಡಿ, ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯ ಬಲವರ್ಧನೆಯೇ ನಮ್ಮ ಗುರಿಯಾಗಿರಬೇಕು. ಅನ್ಯಾಯ ಹಾಗೂ ಸಮಸ್ಯೆಗಳ ವಿರುದ್ಧ ಜನಪರವಾಗಿ ಹೋರಾಟ ನಡೆಸಬೇಕು ಎಂದರು.


ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜೆ.ಎಂ.ನಾಸಿರ್ ಅಹಮ್ಮದ್ ಮಾತನಾಡಿ, ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ ತಿಳಿಸಿದರು.