ಚಿಕ್ಕಮಗಳೂರು: ನಗರ ಭಾಗದಲ್ಲಿ ಬೀದಿದೀಪಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಆಮ್‌ಆದ್ಮಿ ಪಕ್ಷದ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಎಎಪಿ ರಾಜ್ಯ ಕಾಫಿ ಬೆಳೆಗಾರರ ಘಟಕದ ಅಧ್ಯಕ್ಷ ಹೇಮಂತ್‌ಕುಮಾರ್, ಈಗಾಗಲೇ ನಗರದಲ್ಲಿ ಬೀದಿದೀಪಗಳ ಸಮಸ್ಯೆ ಕಳೆದ ಆರೇಳು ತಿಂಗಳಿAದ ಹೆಚ್ಚಾಗಿದೆ. ಈ ಬಗ್ಗೆ ಹಿಂದೆ ಎಎಪಿ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದರೂ ಆಶ್ವಾಸನೆ ಹೊರತಾಗಿ ಸಮಸ್ಯೆ ಬಗೆಹರಿದಿಲ್ಲ ಎಂದು ದೂರಿದರು.
ನಗರದ ಮಾರುಕಟ್ಟೆಯ ಹತ್ತಿರ ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೀದಿದೀಪವಿಲ್ಲದೇ ತೀವ್ರ ತೊಂದರೆಯಾಗಿದೆ. ಟೆಂಡರ್ ಚಿಕನ್‌ನಿಂದ ಜಿಪಂ ಕಚೇರಿವರೆಗೆ ಬೀದಿದೀಪವಿಲ್ಲ. ಹೀಗಾಗಿ ಶೀಘ್ರದಲ್ಲೇ ಜಿಲ್ಲಾಧಿಕಾರಿಗಳು ಆಯುಕ್ತರಿಗೆ ಸೂಚನೆ ನೀಡುವ ಮೂಲಕ ಬೀದಿದೀಪ ಅಳವಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಎಪಿ ಜಿಲ್ಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೈಯದ್ ಜಮೀಲ್ ಅಹ್ಮದ್, ಮುಖಂಡ ರಂಗನಾಥ್ ಮತ್ತಿತರರಿದ್ದರು.