ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ಪದ್ಮರಾಜನಗರದ ಅದ್ವೆತ ವಿದ್ಯಾಶ್ರಮದ ಶ್ರೀ ಶಂಕರಾನಂದ ತೀರ್ಥ ಸ್ವಾಮೀಜಿಯವರ ಆರಾಧನಾ ಮಹೋತ್ಸವನ್ನು ನ. 28ರಂದು ಏರ್ಪಡಿಸಲಾಗಿದೆ.
ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದ್ದು, ಸಾನ್ನಿಧ್ಯವನ್ನು ಶ್ರೀ ಪ್ರಣವಾನಂದತೀರ್ಥ ಸ್ವಾಮೀಜಿ ವಹಿಸುವರು.
ಅಂದು ಬೆಳಗ್ಗೆ 10ಕ್ಕೆ ಧಾರವಾಡದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆಯ ಪ್ರಾಧ್ಯಾಪಕ ತರ್ಕರತ್ನ ವಾಚಸ್ಪತಿ ಶಾಸ್ತ್ರೀ ಜೋಶಿ ಅವರಿಂದ ವಿಶೇಷ ಉಪನ್ಯಾಸ ಜರುಗಲಿದೆ.
ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ವಿದ್ಯಾಶ್ರಮದ ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ಕೋರಿದೆ.