ಹೆಬ್ರಿ: ಕಿತ್ತೂರು ರಾಣಿ ಚನ್ನಮ್ಮ 200ನೇ ವರ್ಷದ ವಿಜಯೋತ್ಸವದ ಅಂಗವಾಗಿ 6ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಕಿತ್ತೂರು ರಾಣಿ ಚೆನ್ನಮ್ಮ ಜೀವನ ಚರಿತ್ರೆ ಮತ್ತು ಸಾಧನೆಗಳು’ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಮುನಿಯಾಲು ಕೆಪಿಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ವರಂಗದ ಆರಾಧ್ಯಾ ಮೈಸೂರು ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವರಂಗ ಕುಡ್ತಾಲು ರುಕ್ಕು ಪೂಜಾರ್ತಿ ಮೊಮ್ಮಗಳು ಹಾಗೂ ರಾಜೇಶ್ ಮತ್ತು ಸುಗಂಧಿ ದಂಪತಿ ಪುತ್ರಿ.