ಜಿಲ್ಲೆ

ಶೋಭಾ ಕರಂದ್ಲಾಜೆಗೆ ಆರತಿ ಬೆಳಗಿ ಅಭಿನಂದನೆ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನಗರ ಬಿಜೆಪಿ ಮಹಿಳಾ ಮೋರ್ಚಾದಿಂದ ಆರತಿ ಬೆಳಗಿ ಅಭಿನಂದಿಸಿತು.
ಕೊನೆಯ ಆಷಾಢ ಶುಕ್ರವಾರ ಹಿನ್ನೆಲೆ ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ಅವರನ್ನು ನಗರ ಬಿಜೆಪಿ ಕಚೇರಿಯಲ್ಲಿ ಗೌರವಿಸಲಾಯಿತು. ಮಹಿಳಾ ಪದಾಧಿಕಾರಿಗಳು ಆರತಿ ಬೆಳಗಿ ಶುಭ ಕೋರಿದರು.
ಕಾರ್ಯಕ್ರಮಕ್ಕೂ ಮುನ್ನ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ತೆರಳಿ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕಾ ರಾಜ್, ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ಹಾಗೂ ಮಮತಾ ಶೆಟ್ಟಿ, ನರಸಿಂಹರಾಜ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ಮಾಲಿನಿ ಪಾಲಾಕ್ಷ. ಚಾಮುಂಡೇಶ್ವರಿ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ಸವಿತಾಗೌಡ, ಚಾಮರಾಜ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ಇತರರು ಇದ್ದರು.