filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6564815, 0.83409697);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40; 
ಜಿಲ್ಲೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಸ್ಕೂಟರ್ ಹಸ್ತಾಂತರ

Mangaluru - Hariprasad Rai


ಮಂಗಳೂರು : ಅಪಘಾತದಿಂದ ಒಂದು ಕಾಲು ಮುರಿತಕ್ಕೆ ಒಳಗಾದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯ ಲತೀಶ್ ಕುಮಾರ್
.ಕೆ. ಅವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘದ ವತಿಯಿಂದ ಕೊಡುಗೆಯಾಗಿ ತ್ರಿಚಕ್ರ ಸ್ಕೂಟರ್ ಹಸ್ತಾಂತರಿಸುವ
ಕಾರ್ಯಕ್ರಮ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ನಡೆಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿದ್ದರು. ದ.ಕ. ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ದಿನಕರ್ ಕುಲಾಲ್ ಸ್ಕೂಟರ್ ಹಸ್ತಾಂತರಿಸಿದರು.
ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಸೀತಾರಾಮ್ ಎನ್,
ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಟ್ರಸ್ಟ್‌ನ ಗೌರವಾಧ್ಯಕ್ಷ ವಾಮನ್ ಕೆ., ದ.ಕ.ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ಧನ ಅತ್ತಾವರ , ಸಂಘದ ಹಿರಿಯ ಸದಸ್ಯ ಕೃತೀಶ್ ಕುಮಾರ್ ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರದೆ ಸಮಾಜಸೇವೆಯ ಕಾರ್ಯ ನಡೆಸುತ್ತಿದೆ. 85ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರ, 750ಕ್ಕೂ ಮಿಕ್ಕಿ ಕಣ್ಣಿನ ಶಸ್ತ್ರಚಿಕಿತ್ಸೆ, 19,000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಔಷದಿ ವಿತರಣೆ, ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮುಂತಾದ
ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.