ಜಿಲ್ಲೆ

ಹಿಂದಿನ ಆಚಾರ ವಿಚಾರಗಳು ಇಂದಿಗೂ ಪ್ರಸ್ತುತ : ಸುರೇಶ್ ವಿ. ಅಭಿಪ್ರಾಯ

ಸೌಮ್ಯ ಆರ್

ವಿಜಯಮಾಣಿ ಸುದ್ದಿಜಾಲ ಬೆಳ್ತಂಗಡಿ

ಹಿಂದಿನ ಕಾಲದಲ್ಲಿ ಹಿರಿಯರು ಕಷ್ಟದ ದಿನಗಳಾದರೂ ಮಕ್ಕಳಿಗೆ ಉತ್ತಮ ಸಂಸ್ಕಾರಗಳನ್ನು ಕಲಿಸುತ್ತಿದ್ದರು. ಆಚಾರ ವಿಚಾರಗಳನ್ನು ತಿಳಿಸುವ ಜತೆಗೆ ಶಿಕ್ಷಣ ಕಲಿಸುತ್ತಿದ್ದರು. ಆಟಿ ಕೂಟ ಕಾರ್ಯಕ್ರಮ ಮಾಡುವ ಮೂಲಕ ಮಕ್ಕಳಲ್ಲಿ ಸಂಸ್ಕಾರ ನೀಡುವ ಜತೆಗೆ ಹಿರಿಯ ಆಚಾರ ವಿಚಾರಗಳನ್ನು ತಿಳಿಸಿ ಅದನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಸುರೇಶ್ ವಿ. ಹೇಳಿದರು.

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇಮಾ ಸಮಿತಿ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇಮಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿ ಬೆಳ್ತಂಗಡಿ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಮಾತನಾಡಿದರು. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ಮಾಮಿ ಸೇಮಾ ಸಂಘ ನಿರ್ದೇಶಕಿ ವಿನೋದಿನಿ ರಾಮಪ್ಪ, ವೇಣೂರು ಠಾಣಾ ಹೆಡ್ ಕಾನ್‌ಸ್ಟೆಬಲ್ ಕೇಶವತಿ, ಕುಕ್ಕೆಡಿ ಗ್ರಾಪಂ ಅಧ್ಯಕ್ಷೆ ಅನಿತಾ ಕೆ. ಶುಭಹಾರೈಸಿದರು. ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇಮಾ ಸಮಿತಿ ಗೌರಮಾಧ್ಯಕ್ಷ ಎಚ್.ಧರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್, ಬಳಂಜ ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಲಲಿತಾ, ಅಧ್ಯಕ್ಷೆ ಭಾರತಿ ಸಂತೋಷ್, ಕಾರ್ಯದರ್ಶಿ ಅಶ್ವಿತಾ ಸಂತೋಷ್, ಸಂಘದ ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಉಪಸ್ಥಿತರಿದ್ದರು. ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಸ್ಮಾಗತಿಸಿದರು. ಮಹಿಳಾ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ನಿರೂಪಿಸಿದರು.

75 ವಿವಿಧ ಬಗೆಯ ತಿಂಡಿ ತಿನಿಸುಗಳು

ಬಿಲ್ಲವ ಸಮಾಜ ಬಾಂಧವರು ಮನೆಯಲ್ಲೇ ತಯಾರಿಸಿ ತಂದಿದ್ದ 75 ಬಗೆಯ ತಿಂಡಿ ತಿನಿಸುಗಳನ್ನು ಭೋಜನದೊಂದಿಗೆ ಹಂಚಿ ಆಟಿಯ ಸಂಭ್ರಮ ಆಚರಿಸಲಾಯಿತು. ತಿಂಡಿ ತಿನಿಸುಗಳನ್ನು ಮನೆಯಲ್ಲಿ ತಯಾರಿಸಿ ತಂದ ಮಹಿಳಾ ಬಿಲ್ಲವ ವೇದಿಕೆ ಸದಸ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.