ಜಿಲ್ಲೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವಿಶೇಷ ಪ್ರಶಸ್ತಿ

Mangaluru - Hariprasad Rai


ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ , ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತ್ರತ್ವದಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ
ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2024ನೇ ಸಾಲಿನ ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ ಪ್ರಶಸ್ತಿ ನೀಡಲಾಯಿತು. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಹಕಾರ ಸಚಿವ ಕೆ. ಎನ್. ರಾಜಣ್ಣ , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್, ಶಾಸಕ ಲಕ್ಷ್ಮಣ ಸಂಗಪ್ಪ ಸವದಿ,
ಸ್ಪೀಕರ್ ಯು.ಟಿ ಖಾದರ್ , ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮುಂತಾದ ಗಣ್ಯರ ಉಪಸ್ಥಿರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ.,ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್.ಕೊಂಡಾಣ, ರಮಾನಾಥ್ ಸನಿಲ್, ಗೋಪಾಲ್ ಎಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಲಹೆಗಾರ
ಅಶೋಕ್ ಕುಮಾರ್ ಉಪಸ್ಥಿತರಿದ್ದರು.