ಜಿಲ್ಲೆ

ಆವಿಷ್ಕಾರ ವಿಜ್ಞಾನ ಸ್ಪರ್ಧೆ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಷ್ಟ್ರೀಯ ವಿಜ್ಞಾನ ಮತ್ತು ಗಣಿತ ದಿನ ನಿಮಿತ್ತ ನಗರದ ಸ್ವಾಮಿ ವಿವೇಕಾನಂದ ಯೂತ್​ ಮೂವಮೆಂಟ್​ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ವನಿತಾ ಸೇವಾ ಸಮಾಜದ ಆವರಣದಲ್ಲಿ ಜ. 10ರಂದು ಬೆಳಗ್ಗೆ 10.30ಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ಮಕ್ಕಳಿಗೆ ಆವಿಷ್ಕಾರ-2025 ಅಂತರ ಶಾಲಾ ಮಟ್ಟದ ವಿಜ್ಞಾನ ಸ್ಪರ್ಧೆ ಏರ್ಪಡಿಸಲಾಗಿದೆ.

ಡಿಡಿಪಿಐ ಎಸ್​.ಎಸ್​. ಕೆಳದಿಮಠ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜಗದೀಶ ತೋಳಣ್ಣವರ, ಶಿವಾನಂದ ಮಲ್ಲಾಡ, ರಾಮಕೃಷ್ಣ ಸದಲಗಿ ಆಗಮಿಸಲಿದ್ದಾರೆ. ಡಾ. ಗೋಪಾಲಕೃಷ್ಣ ಕಮಲಾಪುರ ಅಧ್ಯಕ್ಷತೆ ವಹಿಸಲಿದ್ದಾರೆ.

ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ವೃದ್ಧಿಸುವುದು ಹಾಗೂ ಸ್ಪರ್ಧಾತ್ಮಕ ಗುಣ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ 30 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ 40 ಸರ್ಕಾರಿ ಪ್ರೌಢ ಶಾಲಾ ಮಕ್ಕಳು ಶಾಲಾ ಮಟ್ಟದಲ್ಲಿ ಆಯ್ಕೆಯಾಗಿ ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಸಮಾರೋಪ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಲಿದ್ದು, ಅತಿಥಿಗಳಾಗಿ ಡಾ. ವಿ.ಎಂ. ದೇಶಪಾಂಡೆ, ಎಸ್​.ಎಂ. ಹುಡೇದಮನಿ ಆಗಮಿಸಲಿದ್ದಾರೆ. ಜಯಂತ ಕೆ.ಎಸ್​. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.