ರಾಯಚೂರು: ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು. ಗ್ರಾ.ಪಂ. ನೌಕರರು, ಕಾರ್ಖಾನೆ ಕಾರ್ಮಿಕರು ಹಾಗೂ ಔಷಧ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಸಂಸದ ರಾಜಾ ಅಮರೇಶ್ವರ ನಾಯಕ ಕಚೇರಿ ಮುಂದೆ ಸಿಐಟಿಯುನಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಸಂಸದರ ಆಪ್ತ ಕಾರ್ಯದರ್ಶಿ ಶ್ರೀನಿವಾಸಗೆ ಮನವಿ ಸಲ್ಲಿಸಿ, ಕಳೆದ 9 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಜಾರಿ ಮಾಡುವುದರ ಜತೆಗೆ ಕಾರ್ಪೋರೇಟ್ ಬಂಡವಾಳಿಗರ ಪರವಾದ ಆಡಳಿತ ನಡೆಸುತ್ತಿದೆ ಎಂದು ದೂರಿದರು.
ಅಕುಶಲ ಕಾರ್ಮಿಕರಿಗೆ 31 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ಕೆಲಸದ ಅವಯನ್ನು ವಾರಕ್ಕೆ 36 ಗಂಟೆ ಹಾಗೂ ದಿನಕ್ಕೆ 6 ಗಂಟೆಗೆ ಮಿತಿಗೊಳಿಸಬೇಕು. ಉದ್ಯೋಗಾವಕಾಶ ಸೃಷ್ಠಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿ ಪಡಿಸಬೇಕು. ಗುತ್ತಿಗೆ, ಹೊರಗುತ್ತಿಗೆ ಪದ್ಧತಿಯನ್ನು ಕೈಬಿಡಬೇಕು.
ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳನ್ನು ವಾಪಸ್ ಪಡೆಯಬೇಕು. ಮಹಿಳೆಯರನ್ನು ರಾತ್ರಿ ಪಾಳೆಯದಲ್ಲಿ ದುಡಿಸಿಕೊಳ್ಳಲು ಅವಕಾಶ ನೀಡಬಾರದು. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟಲು ಅನುಷ್ಠಾನ ಸಮಿತಿ ಆರಂಭಿಸಬೇಕು.
ಇಎಸ್‌ಐ, ಇಪಿಎ್, ಬೋನಸ್ ಕಾಯ್ದೆಯಲ್ಲಿ ವಿಸಲಾಗಿರುವ ಎಲ್ಲ ವೇತನ ಮಿತಿಗಳನ್ನು ತೆರವುಗೊಳಿಸಬೇಕು. ದೀರ್ಘಕಾಲಿಕ ಸ್ವರೂಪದ ಉದ್ಯೋಗದಲ್ಲಿ ಗುತ್ತಿಗೆ ಕಾರ್ಮಿಕ ವ್ಯವಸ್ಥೆಯನ್ನು ರದ್ದುಗೊಳಿಸಬೇಕು. ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಪದಾಕಾರಿಗಳಾದ ಡಿ.ಎಸ್.ಶರಣಬಸವ, ಶಬ್ಬೀರ್, ಗಿರಿಯಪ್ಪ ಪೂಜಾರಿ, ಶರ್ುದ್ದೀನ್, ಅನ್ವರ್ ಪಾಷಾ, ಎಂ.ಶರಣಗೌಡ, ಚನ್ನಾರೆಡ್ಡಿ, ಪ್ರವೀಣರೆಡ್ಡಿ ಗುಂಜಳ್ಳಿ, ಮಲ್ಲಿಕಾರ್ಜುನ, ಜಂಬಣ್ಣ, ಸುರೇಶ, ಮಹ್ಮದ್, ಷಣ್ಮುಖಪ್ಪ ಪಾಲ್ಗೊಂಡಿದ್ದರು.