ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಸರ್ವೇ ಕಾರ್ಯ ನಿಲ್ಲಿಸಿ, ಜಿಲ್ಲಾಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರವೇ ಪ್ರವಿಣ್​ ಕುಮಾರ್​ ಶೆಟ್ಟಿ ಬಣದಿಂದ ಆಸ್ಪತ್ರೆಯ ಮುಖ್ಯಾಧಿಕಾರಿ ಡಾ.ರಮೇಶ್​ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಹಮಾಮ್​ ವೆಂಕಟೇಶ್​, ಪ್ರಧಾನ ಕಾರ್ಯದರ್ಶಿ ಎನ್​.ವೇಣು, ಉಪಾಧ್ಯಕ್ಷ ಜೋಗಹಳ್ಳಿ ಅಮ್ಮು, ಕಾರ್ಯದರ್ಶಿ ಮಂಜು, ಖಜಾಂಚಿ ಆನಂದ್​, ನಗರಾಧ್ಯಕ್ಷ ಶ್ರೀನಗರ ಬಶೀರ್​ ಇದ್ದರು. 
ಜಿಲ್ಲೆ

ಆಸ್ಪತ್ರೆಯಲ್ಲಿ ಕೈಗೊಂಡಿರುವ ಸರ್ವೇ ಕಾರ್ಯ ಕೈಬಿಡಿ

ದೊಡ್ಡಬಳ್ಳಾಪುರ : ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಹೆಚ್ಚುವರಿ ಆರೋಗ್ಯ ಸೌಲಭ್ಯ ಕಲ್ಪಿಸುವ ನೆಪದಲ್ಲಿ ಮಂಜೂರಾಗಿರುವ ಜಿಲ್ಲಾಸ್ಪತ್ರೆಯನ್ನು ತಪ್ಪಿಸುವ ಹುನ್ನಾರದಿಂದ ಸರ್ವೇ ಮಾಡಲಾಗುತ್ತಿದೆ. ಈ ಸರ್ವೇಯನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕನ್ನಡ ರಕ್ಷಣಾ ವೇದಿಕೆ (ಪ್ರವಿಣ್​ ಶೆಟ್ಟಿ ಬಣ) ತಾಲೂಕು ಟಕದಿಂದ ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆ ಆಡಳಿತಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಅಧ್ಯಕ್ಷ ಹಮಾಮ್​ ವೆಂಕಟೇಶ್​ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆ ಆವರಣದಲ್ಲಿ ಸರ್ವೇ ಮಾಡಿ ಹೆಚ್ಚುವರಿ ಆರೋಗ್ಯ ಸೌಲಭ್ಯಕ್ಕಾಗಿ ಕಟ್ಟಡಕ್ಕೆ ನೆ ತಯಾರಿಸಲು ಸರ್ವೇ ಮಾಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಇದು ದುರುದ್ದೇಶ ಪೂರ್ವಕ. ತಾಲೂಕಿಗೆ ಜಿಲ್ಲಾಸ್ಪತ್ರೆ ಮಂಜೂರಾಗಿದೆ. ಆದರೆ, ಈವರೆಗೆ ಕಟ್ಟಡದ ಕಾಮಗಾರಿ ಆರಂಭವಾಗಿಲ್ಲವೇಕೆ ಎಂದು ಪ್ರಶ್ನಿಸಿದರು. ನೂತನ ಜಿಲ್ಲಾಸ್ಪತ್ರೆ ನಿರ್ಮಾಣದ ಬದಲಾಗಿ ಇಲ್ಲಿಯ ಸಾರ್ವಜನಿಕ ತಾಯಿ&ಮಗು ಆಸ್ಪತ್ರೆಯ ಆವರಣದಲ್ಲಿಯೇ ನೂತನ ಕಟ್ಟಡ ನಿರ್ಮಿಸಲು ಸಿದ್ಧತೆ ನಡೆಯುತ್ತಿದೆ ಎನ್ನಲಾಗುತ್ತಿದೆ.ಇದನ್ನು ಸರ್ಕಾರ ಕೈಬಿಟ್ಟು ತಾಲೂಕಿನಲ್ಲಿಯೇ ಜಿಲ್ಲಾಸ್ಪತ್ರೆ ನಿರ್ಮಿಸಬೇಕು ಎಂದು ಒತ್ತಾಯಿಸಿದರು.