ಜಿಲ್ಲೆ

ಬಿಜೆಪಿ ಷಡ್ಯಂತ್ರ ಫಲಿಸದು, ಶಾಸಕ ಅಬ್ಬಯ್ಯ ಹೇಳಿಕೆ

Dharwada - Basavaraj Idli

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯರ ಜನಪ್ರಿಯತೆ ಸಹಿಸದೆ ಅವರನ್ನು ಕೆಳಗಿಳಿಸಲು ಬಿಜೆಪಿಯವರು ಮಾಡಿರುವ ಷಡ್ಯಂತ್ರ ಯಶಸ್ವಿಯಾಗುವುದಿಲ್ಲ ಎಂದು ಸ್ಲಮ್ ಬೋರ್ಡ್ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.

ನ್ಯಾಯಾಲಯ ಸಿಎಂ ಅರ್ಜಿ ವಜಾ ಮಾಡಿರಬಹುದು. ಆದರೆ, ಮುಂದಿನ ಕಾನೂನು ಹೋರಾಟಕ್ಕೆ ಇನ್ನೂ ಅವಕಾಶ ಇದೆ. ಹಾಗಾಗಿ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಲ್ಲಿರುವ ಬಿಜೆಪಿಯೇತರ ಸರ್ಕಾರಗಳನ್ನು ಕುತಂತ್ರದಿಂದ ಕೆಡವಿ ಹಿಂಬಾಗಿಲಿನಿಂದ ಸರ್ಕಾರ ರಚನೆ ಮಾಡಿದ ನಿದರ್ಶನಗಳು ಜನರಿಗೆ ಗೊತ್ತಿದೆ. ಅದೇ ಮಾದರಿಯಲ್ಲಿ ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಮಾಡಲು ಷಡ್ಯಂತ್ರ ಮಾಡುತ್ತಿದೆ. 136 ಶಾಸಕರು ಒಟ್ಟಾಗಿದ್ದೇವೆ. ಶಾಸಕರನ್ನು ಖರೀದಿ ಮಾಡಲು ಸಾಧ್ಯವಾಗದೇ ರಾಜ್ಯಪಾಲರ ಕಚೇರಿಯನ್ನು ರ್ದುಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಿಬಿಐ, ಐಟಿ, ಇಡಿಗಳನ್ನು ಬಳಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಅವರು ಟೀಕಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ತಕ್ಷಣ ಅವರು ರಾಜೀನಾಮೆ ನೀಡಿರಲಿಲ್ಲ. ಬದಲಾಗಿ ಜಮೀನು ಡಿ-ನೋಟಿಫಿಕೇಷನ್ ಕುರಿತು ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ರಾಜೀನಾಮೆ ನೀಡಿದ್ದರು ಎಂಬುದು ಗಮನಾರ್ಹ. ಹಾಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.