ಜಿಲ್ಲೆ

ಹೊಟ್ಟೆನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಹಾವೇರಿ: ಹೊಟ್ಟೆನೋವು ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಳಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮುತ್ತಪ್ಪ ಗುಡ್ಡಪ್ಪ ದೇವಗಿರಿ (50) ಮೃತ ವ್ಯಕ್ತಿ.
ಈತ 2 ವರ್ಷದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.