ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮದಿನ ಆಚರಿಸಲಾಯಿತು.  
ಜಿಲ್ಲೆ

ಅಬ್ದುಲ್ ಕಲಾಂ ಆದರ್ಶ ಅಳವಡಿಕೆ

ಇಂದಿರಾ ಎನ್ ಕೆ

ಕಾರ್ಕಳ: ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂರವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಹೇಳಿದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ಮಂಗಳವಾರ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ಫ್ರೆಂಡ್ಸ್ ಕ್ಲಬ್ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ.ಪೂಜಾರಿ, ಪೂರ್ವಾಧ್ಯಕ್ಷ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ಪ್ರಶಾಂತ್ ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಜತೆ ಕಾರ್ಯದರ್ಶಿ ಅನ್ನಪೂರ್ಣ ಕಾಮತ್, ಕೋಶಾಧಿಕಾರಿ ಆರತಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲೀಲಾ ಪೂಜಾರಿ, ಸದಸ್ಯರಾದ ಕೀರ್ತನ್ ಪೂಜಾರಿ, ಪ್ರದೀಪ್ ಸುವರ್ಣ, ಯೋಗಿಶ್ ಆಚಾರ್ಯ, ಸುರೇಶ್ ಅಬ್ಬನಡ್ಕ, ಲಲಿತಾ ಆಚಾರ್ಯ, ಅಶ್ವಿನಿ ಪ್ರಭಾಕರ್, ಸುಲೋಚನಾ ಕೋಟ್ಯಾನ್, ಪದ್ಮಶ್ರೀ ಪೂಜಾರಿ, ವೀಣಾ ಆಚಾರ್ಯ, ವೀಣಾ ಪೂಜಾರಿ, ಪುಷ್ಪ ಕುಲಾಲ್ ಉಪಸ್ಥಿತರಿದ್ದರು.