ಹಿರಿಯೂರು: ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸ್ವತಂತ್ರ ಭಾರತದಲ್ಲಿ ಆರಂಭದಿಂದಲೂ ಬ್ರಿಟಿಷ್ ಶಿಕ್ಷಣ ಪದ್ಧತಿಯೇ ಜಾರಿಯಲ್ಲಿದೆ. ಗುಣಮಟ್ಟದ ಶಿಕ್ಷಣ, ಕೌಶಲ ಅಭಿವೃದ್ಧಿ, ಆಧುನಿಕ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಕೇಂದ್ರ ಸರ್ಕಾರ ದೃಢ ನಿರ್ಧಾರದ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ರಾಜಕೀಯ ಕಾರಣಕ್ಕೆ ಎನ್‌ಇಪಿ ಜಾರಿಗೊಳಿಸುವ ಹಂತದಲ್ಲೇ ರದ್ದುಗೊಳಿಸಲು ಹೊರಟಿರುವುದು ಶಿಕ್ಷಣ ವಿರೋಧಿಯಾಗಿದೆ, ಎನ್‌ಇಪಿ ರದ್ದು ನಿಲುವು ಕೈ ಬಿಡಬೇಕು ಎಂದು ಆಗ್ರಹಿಸಿದರು.
ನಗರದ ಗಾಂಧಿ ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ, ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.
ಎಬಿವಿಪಿ ತಾಲೂಕು ಸಂಚಾಲಕ ಮಂಜೇಶ್, ಕಾರ್ಯಕಾರಿಣಿ ಸದಸ್ಯ ಸುದರ್ಶನ್, ಧನುಷ್, ರಾಮು, ರಮೇಶ್, ಕನಕರಾಜ್, ವಿವೇಕ್, ಬಾಲಾಜಿ, ವಿಕ್ರಮ್, ತಿಪ್ಪೇಶ್, ಅಜಯ್, ಮಧು, ಕಿರಣ್, ಶ್ರೀನಿವಾಸ್, ಮಾರುತಿ, ಗಾಯತ್ರಿ, ಮಂಜುಳಾ, ರಮ್ಯಾ, ರಚಿತಾ ಇತರರಿದ್ದರು.