ಜಿಲ್ಲೆ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಇಂದಿರಾ ಎನ್ ಕೆ

ಪಡುಬಿದ್ರಿ: ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರ ಆರೋಪಿ ಹೂವಿನಹಡಗಲಿ ನಿವಾಸಿ ನಾಗನಗೌಡ ಎಂಬಾತ ಷರತ್ತಿನ ಜಾಮೀನು ಪಡೆದ ಬಳಿಕ ವಿಚಾರಣೆಗೆ ಹಾಜರಾಗದಿರುವುದರಿಂದ ಪೊಲೀಸರು ಆತನನ್ನು ಹೂವಿನಹಡಗಲಿಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಆತನ ಪ್ರಕರಣ ಪ್ರಸ್ತುತ ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 2022ರ ಆ.24ರಿಂದ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆತನ ವಿರುದ್ಧ 9 ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ತೀವ್ರ ಶೋಧ ನಡೆಸಿದ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.