ಬಂಟ್ವಾಳ: ಕೊಲೆ ಯತ್ನ ಪ್ರಕರಣದಲ್ಲಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಿ.ಮೂಡ ಗ್ರಾಮದ ಅಕ್ಬರ್ ಸಿದ್ದಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2011ರಲ್ಲಿ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ವಾರಂಟ್ ಜಾರಿಯಾಗಿದ್ದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಸೋಮವಾರ ಧರ್ಮಸ್ಥಳದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.