ಜಿಲ್ಲೆ

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸೌಮ್ಯ ಆರ್

ಕಾಸರಗೋಡು: ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದು, ನಂತರ ತಲೆಮರೆಸಿಕೊಂಡಿದ್ದ ಚಿತ್ರದುರ್ಗ ನಿವಾಸಿ ತಿಮ್ಮಯ್ಯ (38) ಎಂಬಾತನನ್ನು ಮಂಜೇಶ್ವರ ಠಾಣೆ ಪೊಲೀಸರು ಬೆಂಗಳೂರಿನಿಂದ ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿಗೆ 2020ರಲ್ಲಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಿಮ್ಮಯ್ಯನನ್ನು ಪೋಕ್ಸೋ ಅನ್ವಯ ಬಂಧಿಸಿದ್ದರು. ನಂತರ ಜಾಮೀನಿನಲ್ಲಿ ಹೊರಬಂದ ಈತ ತಲೆಮರೆಸಿಕೊಂಡಿದ್ದ. ಈತ ಬೆಂಗಳೂರಿನಲ್ಲಿರುವ ಬಗ್ಗೆ ಲಭಿಸಿದ ಮಾಹಿತಿಯನ್ವಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್‌ಭಾರತ್ ರೆಡ್ಡಿ ನಿರ್ದೇಶನ ಪ್ರಕಾರ ಪೊಲೀಸರ ತಂಡ ಬೆಂಗಳೂರಿಗೆ ತೆರಳಿ ಕಾರ್ಯಾಚರಣೆ ನಡೆಸಿದೆ.