ಮಂಗಳೂರು ಹಂಪನ್‌ಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ ಹೋರಾಟಗಾರ ಬಿ.ವಿ.ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ನವದೆಹಲಿಯ ವಿಶ್ವವಿದ್ಯಾನಿಲಯದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  
ಜಿಲ್ಲೆ

ಮಂಗಳೂರು ವಿವಿ ಕಾಲೇಜಿನಲ್ಲಿ ಡಾ.ಶಂಸುಲ್ ಉಪನ್ಯಾಸ ವಿರುದ್ಧ ಎಬಿವಿಪಿ ಪ್ರತಿಭಟನೆ

ಮಂಗಳೂರು: ನಗರದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ ಹೋರಾಟಗಾರ ಬಿ.ವಿ.ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ನೀಡಿದ ನವದೆಹಲಿಯ ವಿಶ್ವವಿದ್ಯಾನಿಲಯದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ ಡಾ.ಶಂಸುಲ್ ಇಸ್ಲಾಂ ವಿರುದ್ಧ ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ‘ಗೋ ಬ್ಯಾಕ್ ಶಂಸುಲ್’ ಫಲಕ ಪ್ರದರ್ಶಿಸಿದರು. ಪ್ರತಿಭಟನೆ ನಿರತ ಓರ್ವ ವಿದ್ಯಾರ್ಥಿನಿ ಸಹಿತ ಒಟ್ಟು 12 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಬಿ.ವಿ.ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರೃ ಸಂಗ್ರಾಮ 1857- ಜಂಟಿ ಬಲಿದಾನ, ಜಂಟಿ ವಾರೀಸುದಾರಿಕೆ’ ವಿಷಯದಲ್ಲಿ ಭಾಷಣ ಮಾಡಿದರು.