ಜಿಲ್ಲೆ

ಬಸ್​ ಸೇವೆ ಕಲ್ಪಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Gadag - Shivanand Hiremath

ಗದಗ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ಸೇವೆ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ನಗರದ ಬಸ್ ನಿಲ್ದಾಣದಲ್ಲಿ ಎಬಿವಿಪಿ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆ ನಡೆಸಿದರು.

ಎಬಿವಿಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.

ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ನಂತರ ಶಾಲಾ ಕಾಲೇಜಿಗೆ ತೆರಳಲು ವಿದ್ಯಾರ್ಥಿ ಅನಾನುಕೂಲ ಆಗುತ್ತಿದೆ.  ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವಂತೆ ಮತ್ತು ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು. 

ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದಂತೆ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು. ಬಸ್ ಸಂಚಾರಕ್ಕೆ ತಡೆ ನೀಡಿದ್ದರಿಂದ ಕೆಲಹೊತ್ತ ಪ್ರಯಾಣಿಕರಿಗೆ ತೊಂದರೆ ಉಂಟಾಯಿತು. ಪ್ರತಿಭಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಸಾರಿಗೆ ನಿಯಂತ್ರಣಾಧಿಕಾರಿಗಳು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಲು ಯಶಸ್ವಿ ಆದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪುನೀತ್​ ದಂಡಿನ, ರವಿ ಸೇರಿದಂತೆ ಜಿಲ್ಲಾ ಟಕದ ಕಾರ್ಯಕರ್ತರು ಇದ್ದರು.