ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ನೇಹಾ ಹತ್ಯೆ ನಂತರ ಪೊಲೀಸರು ಹಂತಕನ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ. ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಕೂಡಲೇ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ ಮನವಿಯನ್ನು ಶಹರ ತಹಸೀಲ್ದಾರ್ ಕಲಗೌಡ ಪಾಟೀಲ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ರವಾನಿಸಲಾಯಿತು.
ಪ್ರಮುಖರಾದ ಮೌನೇಶ ವಿ.ಆರ್. ಗೌಡ, ಶಶಿ ರೋ., ಯಶ ಮಾಲಶೆಟ್ಟಿ, ಅನ್ಮೋಲ್ ಕಲಬುರ್ಗಿ, ನವೀನ ಹುಬ್ಬಳ್ಳಿ, ಅಭಿಷೇಕ ಎಲ್., ನಾಗರಾಜ ಎಸ್. ಇತರರಿದ್ದರು.