ಜಿಲ್ಲೆ

ನೂತನ ಶಿಕ್ಷಣ ನೀತಿ ಮುಂದುವರಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

Belagavi - Ravi Arjun Gosavi

ಬೆಳಗಾವಿ : ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುವ ರಾಜ್ಯ ಸರ್ಕಾರ ನಿರ್ಧಾರವನ್ನು ಖಂಡಿಸಿ, ನೂತನ ಶಿಕ್ಷಣ ನೀತಿಯನ್ನು ಮುಂದುವರಿಸಿವಂತೆ ಆಗ್ರಹಿಸಿ ಗುರುವಾರ ಎಬಿವಿಪಿ ಕಾರ್ಯಕರ್ತರು ಜಿಲ್ಲಾಡಳಿಕಾರಿ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.

ನಗರದ ಚನ್ನಮ್ಮ ವೃತ್ತದಿಂದ ಬೃಹತ್ ಪ್ರತಿಭಟನಾ ರ‌್ಯಾಲಿ ಆರಂಭಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರವು ತನ ಮರ್ಜಿಯಂತೆ ರೂಪಿಸಿಲ್ಲ. ದೇಶಾದ್ಯಂತ ವಿವಿಧ ಸ್ಥರಗಳಲ್ಲಿ ಎಲ್ಲ ಶಿಕ್ಷಣ ತಜ್ಞರ ಜೊತೆಗೆ ನಿರಂತರ ಚರ್ಚೆ ನಡೆಸಿ ಹೊಸ ಶಿಕ್ಷಣ ನೀತಿಯನ್ನು ರಚನೆ ಮಾಡಿದೆ. ಶೈಕ್ಷಣಿಕ ದೃಷ್ಟಿಯಿಂದ ಅದರ ಪರಾಮರ್ಶನ ನಡೆಸಬೇಕು. ಸಣ್ಣ ಪುಟ್ಟ ದೋಷಗಳು ಕಂಡು ಬಂದಲ್ಲಿ ವಿದ್ಯಾರ್ಥಿಗಳ ಹಿತ ಗಮನದಲ್ಲಿಟ್ಟುಕೊಂಡು ಅದನ್ನು ಸರಿಪಡಿಸಿಕೊಂಡುರಾಜ್ಯ ಸರ್ಕಾರ ಇದೀಗ ರಾಜಕೀಯ ಕಾರಣಕ್ಕಾಗಿ ನೂತನ ಶಿಕ್ಷಣ ನೀತಿಯನ್ನು ವಿರೋಧಿಸುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.
 

ಈಗ ಜಾರಿಯಲ್ಲಿರುವ ಹೊಸ ಶಿಕ್ಷಣ ನೀತಿ, ಅದರ ಸಾಧಕ, ಬಾಧಕಗಳ ಬಗ್ಗೆ ಸೂಕ್ತ ವೇದಿಕೆಯಲ್ಲಿ ಚರ್ಚೆ ನಡೆಸದೆ, ಶಿಕ್ಷಣ ತಜ್ಞರ  ಅಭಿಪ್ರಾಯ ಸಂಗ್ರಹಿಸದೆ ರದ್ದುಗೊಳಿಸುವುದು ಸರಿಯಲ್ಲ. ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದೇವೆ ಎನ್ನುವ ಸರ್ಕಾರವು,  ಯಾವ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಬಹಿರಂಗಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಪ್ರೀತಮ ಉಪ್ಪರಿ, ರೋಹಿತ ಉಮನಾಬಾದಿಮಠ, ಸಚಿನ ಹಿರೇಮಠ, ಪ್ರಶಾಂತ ಶೆಲ್ಲಿಕೆರಿ, ಸುಹಾಸ ಹುದ್ದಾರ, ಕಿಶೋರಿ ಪಾಟೀಲ, ಸ್ನೇಹಾ ಧಾರವಾಡಕರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.