ಜಿಲ್ಲೆ

ಎಸಿ, ತಹಸಿಲ್ದಾರರಿಂದ ಮನೆ, ಬೆಳೆ ಹಾನಿ ಪರಿಶೀಲನೆ

ಧಾರವಾಡ: ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಜಿಲ್ಲಾಧಿಕಾರಿ ದಿವ್ಯ ಪ್ರಭು, ಎಸಿ ಹಾಗೂ ಎಲ್ಲ ತಾಲೂಕುಗಳ ತಹಸೀಲ್ದಾರ್ ಅವರಿಗೆ ಬೆಳೆ ಹಾನಿ, ಮನೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಧಾರವಾಡ, ಕಲಘಟಗಿ, ಅಳ್ನಾವರ, ಕಲಘಟಗಿ, ನವಲಗುಂದ, ಕುಂದಗೋಳ, ಹುಬ್ಬಳ್ಳಿ ತಾಲೂಕಿನಲ್ಲಿ ಬೆಳೆ ಹಾನಿ ಸಮೀಕ್ಷೆ ತ್ವರೀತವಾಗಿ ಮಾಡಲು ಅಗತ್ಯ ಕ್ರಮವಹಿಸಲಾಗಿದೆ.

ನಿರಂತರ ಮಳೆಯಿಂದಾಗಿ ಪೂರ್ವ ಮುಂಗಾರು ಬಿತ್ತನೆಯಿಂದ ಕೊಯ್ಲಿಗೆ ಬಂದಿದ್ದ ಹೆಸರು, ಉದ್ದು ಬೆಳೆ ಹಾನಿಯಾಗುತ್ತಿದೆ. ಬೆಳೆ ವಿಮೆ ಮಾಡಿದ ರೈತರಿಗೆ ನಿಗಧಿತ ಅವಧಿಯಲ್ಲಿ ಹಾನಿ ಕುರಿತು ಅಗತ್ಯ ದಾಖಲೆಗಳೊಂದಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಬೆಳೆ ಹಾನಿ ರೈತರಿಗೆ ನಿಯಮಾನುಸಾರ ಪರಿಹಾರ ಸೀಗುವಂತೆ ಸ್ವತಃ ಎಸಿ, ಎಲ್ಲ ತಹಸೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಮತ್ತು ರೈತರೊಂದಿಗೆ ಇಲಾಖೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಬೆಳೆ ರೋಗ, ಬೆಳೆ ಹಾನಿ ಆಗದಂತೆ ಅಗತ್ಯ ಸಲಹೆ, ಸಹಕಾರ ನೀಡಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.